Veerasaiva Vidyavardhaka Sangha's
Smt. Allum Sumangalamma Memorial College for Women, Ballari.
(Affiliated to Karnataka State Akkamahadevi Women’s University, Vijayapura.)
AISHE CODE: C-8690, NAAC TRACK ID-KACOGN11970.
Recognized under sections 2(f) and 12(B) of the UGC Act 1956.
(Accredited by NAAC in IV Cycle)
Internal Quality Assurance Cell (IQAC)
Smt. ASMC Rangers and NSS Units activity
An awareness program on "Personality Development" conducted on 17.08.2026
Social Media Web link --> https://www.facebook.com/share/p/1Yj6dJgSrW/
![]() |
![]() |
![]() |
ದಿನಾಂಕ:17-08-2026ರಂದು ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ, ಬಳ್ಳಾರಿ, IQAC, NSS ಘಟಕಗಳು ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ಘಟಕಗಳ ಸಹಯೋಗದೊಂದಿಗೆ "ವ್ಯಕ್ತಿತ್ವ ವಿಕಾಸ" ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎo. ಮರಿದೇವಯ್ಯ ರವರು ವಹಿಸಿಕೊಂಡಿದ್ದರು. ಬಳ್ಳಾರಿ ನಗರದ ಶ್ರೀರಾಮಕೃಷ್ಣ ಆಶ್ರಮದ ಪೂಜ್ಯ ಮಾತಾಜಿ ಚೈತನ್ಯಮಯಿ ಇವರು ವ್ಯಕ್ತಿತ್ವ ವಿಕಾಸ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಶ್ರೀಮತಿ ಕಾತ್ಯಾಯಿನಿ ಎಂ ಮರಿದೇವಯ್ಯ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಮ್ಮ ಅಧ್ಯಕ್ಷತೆಯ ನುಡಿಗಳ ಮೂಲಕ ವಿದ್ಯಾರ್ಥಿನಿಯರಿಗೆ ತಿಳಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಗೋವಿಂದರಾಜ ರವರು, IQAC ಸಂಯೋಜಕರಾದ ಡಾ. ಸಾಹಿದ ಕೆ. ಫಾತಿಮಾ ತನ್ವೀರ್ ರವರು, IQAC ಸಹ ಸಂಯೋಜಕರಾದ ಡಾ. ಭೀಮನಗೌಡ ಪಾಟೀಲ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಮಂಗಳ ಬಿ.ಎನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಟಿ. ರಾಮಲಿಂಗ ರವರು ಅತಿಥಿಗಳನ್ನು ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ವಿ.ಇ. ನಂದಿನಿ ಅವರು ವಂದನಾರ್ಪಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿನಿಯರು ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Please click on the following web link for the --> Awareness Programme Report