V.V. Sangha's
Smt. Allum Sumangalamma Memorial College for Women, Ballari.
(Affiliated to Karnataka State Akkamahadevi Women’s University, Vijayapura.)
AISHE CODE: C-8690, NAAC TRACK ID-KACOGN11970.
Recognized under sections 2(f) and 12(B) of the UGC Act 1956.
(Accredited by NAAC in IV Cycle)
Internal Quality Assurance Cell (IQAC)
Physical Education Department activity held on 29.04.2026
Social Media Web link-1 --> https://www.facebook.com/share/r/1DaxNiGUVW/
![]() |
|
Daily News Papers Social Media Web link --> https://www.facebook.com/share/p/18NRc2aoaQ/
![]() |
![]() |
Please click on the following Web link for the --> Day-1 Programme Report
![]() |
![]() |
Social Media Web link-2 --> https://www.facebook.com/share/p/17wWmZSEoV/
![]() |
![]() |
![]() |
![]() |
Kannada Report
ದಿನಾಂಕ:29-04-2026 ರಂದು ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, ಆಂತರಿಕ ಗುಣಮಟ್ಟ ಭರವಸೆಯ ಕೋಶ ಮತ್ತು ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ "2025-26 ನೇ ವಾರ್ಷಿಕ ಕ್ರೀಡಾಕೂಟ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎo. ಮರಿದೇವಯ್ಯ ರವರು ವಹಿಸಿಕೊಂಡಿದ್ದರು. ವೇದಿಕೆಯ ಮೇಲಿರುವ ಎಲ್ಲ ಗಣ್ಯಮಾನ್ಯರು ಕ್ರೀಡಾ ಜ್ಯೋತಿಯನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಮುತ್ತೇಗೌಡ ಕೆ.ವಿ, ಹಿರಿಯ ಆಯ್ಕೆ ದರ್ಜೆಯ ದೈಹಿಕ ಶಿಕ್ಷಣ ನಿರ್ದೇಶಕರು, ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಬಳ್ಳಾರಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕ್ರೀಡೆಗಳಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿದಾಗ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ತಮ್ಮ ಭಾಷಣದ ಮೂಲಕ ತಿಳಿಸಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದೂಪಂ ಸತೀಶ್ ರವರು ಈ ಕ್ರೀಡೆಗಳು ದೈಹಿಕ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸುವ ಮನರಂಜನಾ ಚಟುವಟಿಕೆಗಳಾಗಿವೆ ಮತ್ತು ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು. ಶ್ರೀಮತಿ ಕಾತ್ಯಾಯಿನಿ ಎಂ. ಮರಿದೇವಯ್ಯ ಅವರು ದೈಹಿಕ ಆರೋಗ್ಯ, ಮಾನಸಿಕ ಸದೃಢತೆ ಮತ್ತು ಶಿಸ್ತು ಸಹಕಾರದಂತಹ ಜೀವನ ಮೌಲ್ಯಗಳು ಬೆಳೆಸುವ ಮೂಲಕ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಈ ಕ್ರೀಡೆಗಳು ಅಡಿಪಾಯವಾಗಿವೆ ಮತ್ತು ವಿದ್ಯಾರ್ಥಿನಿಯರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುತ್ತವೆ ಎಂದು ತಮ್ಮ ಅಧ್ಯಕ್ಷತೆಯ ನುಡಿಗಳ ಮೂಲಕ ತಿಳಿಸಿದರು. ಮಹಾವಿದ್ಯಾಲಯದ IQAC ಸಂಯೋಜಕರಾದ ಡಾ. ಸಾಯಿದ ಕೆ.ತನ್ವೀರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಶ್ರೀ ಜಿ ಅಶೋಕ್, ದೈಹಿಕ ಶಿಕ್ಷಣ ವಿಭಾಗದ ವಿದ್ಯಾರ್ಥಿನಿಯರ ಪ್ರಧಾನ ಕಾರ್ಯದರ್ಶಿಗಳಾದ ಪ್ರತ್ಯುಷದೇವಿ, ಸಹ ಕಾರ್ಯದರ್ಶಿಗಳಾದ ಮಲ್ಲೇಶ್ವರಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿ.ಎ ವಿಭಾಗದ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ ಶ್ರೀಲತಾ ವಾರ್ಷಿಕ ಕ್ರೀಡಾಕೂಟದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.ಬಿ.ಎಸ್ಸಿ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ ಶ್ರೇಯ ಅತಿಥಿಗಳನ್ನು ಸ್ವಾಗತಿಸಿದರು. ಬಿ.ಎ ವಿಭಾಗದ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ ಆರತಿ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಬಿ.ಎಸ್ಸಿ ವಿಭಾಗದ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ ಅಮೃತ ವಂದನಾರ್ಪಣೆಯನ್ನು ಮಾಡಿದರು. ಬಿ.ಎ ವಿಭಾಗದ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ ರಾಜೇಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು.