ವೀರಶೈವ ವಿದ್ಯಾವರ್ಧಕ ಸಂಘ, ಬಳ್ಳಾರಿ.
ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ, ಬಳ್ಳಾರಿ.(ಸ್ಥಾಪನೆ-1969)
(ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ, ಸಂಲಗ್ನತೆ ಪಡೆದಿದೆ.)
ವಿಭಾಗ 2 (ಎಫ್) ಮತ್ತು 12 (ಬಿ) ಅಡಿಯಲ್ಲಿ UGC ಯಿಂದ ಗುರುತಿಸಲ್ಪಟ್ಟಿದೆ.
ಆಂತರಿಕ ಗುಣಮಟ್ಟ ಭರವಸೆ ಕೋಶ (IQAC)
ಎನ್.ಎಸ್.ಎಸ್ (N.S.S.) ಮತ್ತು ರೇಂಜರ್ ಘಟಕಗಳ ಚಟುವಟಿಕೆ
Social Media Weblink-1 : https://www.facebook.com/share/p/1d7voeWGxs/
"ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು"
Please click on the following weblink for the --> Karnataka Rajyotsava-2026 Programme Report
![]() |
![]() |
![]() |
ಕನ್ನಡ ರಾಜ್ಯೋತ್ಸವ ಆಚರಣೆ - ನವೆಂಬರ್ 1, 2026ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ನಾಡಗೀತೆ ಗಾಯನದೊಂದಿಗೆ ಆರಂಭವಾಯಿತು. ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ ಹಾಗೂ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಸಾರುವ ವಿವಿಧ ವಿಚಾರಗಳನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಕೊಡುಗೆಯನ್ನು ಸ್ಮರಿಸಿ, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯನ್ನು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಕನ್ನಡ ಭಾಷೆಯ ಮಹತ್ವ, ಕನ್ನಡ ಸಾಹಿತ್ಯದ ವೈಭವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿದರು. ಕನ್ನಡ ಭಾಷೆಯನ್ನು ದೈನಂದಿನ ಜೀವನದಲ್ಲಿ ಬಳಸುವುದರ ಜೊತೆಗೆ, ಕನ್ನಡ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಗೌರವಿಸಿ ಬೆಳೆಸುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮವು ಕನ್ನಡ ನಾಡಿನ ಏಕತೆ, ಭಾಷಾಭಿಮಾನ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವ ಸಂದೇಶದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.
![]() |
![]() |
![]() |
ಕಾರ್ಯಕ್ರಮ ವರದಿ:-
ವೀರಶೈವ ವಿದ್ಯಾವರ್ಧಕ ಸಂಘದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, ದಿನಾಂಕ:01.11.2026ರಂದು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಭುತವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎಂ ಮರಿದೇವಯ್ಯ ಅವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಧೂಪಂ ಸತೀಶ್ ಸರ್ ಅವರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಗೋವಿಂದರಾಜ ಅವರು, IQAC ಸಂಯೋಜಕರಾದ ಡಾ. ಸೈದಾ ಕೆ ತನ್ವೀರ್ ಅವರು,IQAC ಸಹ ಸಂಯೋಜಕರಾದ ಡಾ. ಭೀಮನ ಗೌಡ ಪಾಟೀಲ್, ಎನ್ಎಸ್ಎಸ್ ಅಧಿಕಾರಿಗಳಾದ ಶ್ರೀ ರಾಮಲಿಂಗ ಟಿ, ಶ್ರೀ ಚೋಳೇಂದ್ರ ಭೂಪಾಲ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಅಶೋಕ್ ಜಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರೇಂಜರ್ ಲೀಡರ್ ಆದ ಡಾ. ಮಂಗಳ ಬಿ ಎನ್, ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ತಾಯಿ ಭುವನೇಶ್ವರಿ ದೇವಿಗೆ ಪುಷ್ಪ ನಮನ ಮತ್ತು ರಾಷ್ಟ್ರೀಯ ಧ್ವಜವನ್ನು ಹಾರಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಪ್ರಾಂಶುಪಾಲರಾದ ಧೂಪಂ ಸತೀಶ್ ಸರ್ ಅವರು ಕನ್ನಡ ಭಾಷೆಯ ಮಹತ್ವ ಮತ್ತು ಕನ್ನಡದ ಮೊದಲು ಗಳ ಕುರಿತು ವಿದ್ಯಾರ್ಥಿನಿಯರಿಗೆ ತಿಳಿಸಿದರು. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದರಾಜ ಅವರು ಕರ್ನಾಟಕದ ಏಕೀಕರಣ ಚಳುವಳಿ ಕುರಿತು ತಿಳಿಸಿದರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾತ್ಯಾಯಿನಿ ಎಂ ಮರಿದೇವಯ್ಯ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕನ್ನಡವೆಂದರೆ ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಬದುಕು, ಭಾವನೆ, ಸಂಸ್ಕೃತಿ ಮತ್ತು ಅಸ್ಮಿತೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಬಿ ಎಸ್ ಸಿ ವಿಭಾಗದ ವಿದ್ಯಾರ್ಥಿನಿ ಬಿಂದು ದೇಸಾಯಿ ಪ್ರಾರ್ಥನೆ ಹಾಡಿದರು, ವಿಭಾಗ ವಿಭಾಗದ ಉಪನ್ಯಾಸಕರು ಮತ್ತು ರೇಂಜರ್ ಲೀಡರ್ ಆದ ಡಾಕ್ಟರ್ ಮಂಗಳ ಬಿಎನ್ ಅವರು ಎಲ್ಲರಿಗೂ ಸ್ವಾಗತ ಕೋರಿದರು. ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಎನ್ಎಸ್ಎಸ್ ಅಧಿಕಾರಿಗಳಾದ ಶ್ರೀ ರಾಮಲಿಂಗ ಟಿ ಅವರು ವಂದನಾರ್ಪಣೆ ನಡೆಸಿಕೊಟ್ಟರು ಮತ್ತು ಬಿ.ಎ ವಿಭಾಗದ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿನಿಯರ ಪ್ರಧಾನ ಕಾರ್ಯದರ್ಶಿಯಾದ ಮಾಣಿಕ್ಯಮ್ಮ ಪೂಜಾರಿ ಕಾರ್ಯಕ್ರಮದ ನಿರೂಪಣೆ ಮಾಡಿದರು.
Social Media Weblink-2 : https://www.facebook.com/share/p/1EiXkmKAuJ/